ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಛೇರಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಡಿ ಕನ್ಯಾಣ. ಇವರ ಸಂಯುಕ್ತ ಆಶ್ರಯದಲ್ಲಿ 14ರ ಮತ್ತು 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ “ವಿಕ್ರಾಂತ ಪರ್ವ-2025”ವು ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢ ಶಾಲೆ, ಕೋಡಿಕನ್ಯಾಣ ಇಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ,ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ಅಧ್ಯಕ್ಷರಾದ ಗೀತ ಖಾರ್ವಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಬೀನಾ ಅಂಜುಮ್, ಶಂಕರ್ ಕುಂದರ್,ಡಾ. ಕೃಷ್ಣ ಕಾರಂತ್, ರಾಜೇಂದ್ರ ಸುವರ್ಣ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ವಿಜಯ್ ಕುಮಾರ್ ಶೆಟ್ಟಿ ಅಧ್ಯಕ್ಷರು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಜಯಕುಮಾರ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ರಾಮಚಂದ್ರ ಎಸ್ ಡಿ ಎಮ್ ಸಿ ಅಧ್ಯಕ್ಷರು, ರಾಘವೇಂದ್ರ ಅಡಿಗ ಪ್ರಾಂಶುಪಾಲರು ಪದವಿ ಪೂರ್ವ ಕಾಲೇಜ್ ಕೋಡಿಕನ್ಯಾನ, ಶ್ರೀಮತಿ ರಾಧಿಕಾ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢಶಾಲೆ ಕೊಡಿಕನ್ಯಾನ, ವಿವಿಧ ತಾಲೂಕಿನ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

