ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರಕಾರದ ಅನುಮೋದನೆ ನೀಡಿ ಆದೇಶಿಸಿದೆ.
ಸಮೀಕ್ಷೆಗೆ ಬೇಕಾಗುವ ಮಾಹಿತಿಗಳು ರೇಷನ್ ಕಾರ್ಡ್ ಮನೆಯಲ್ಲಿರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್
ಚುನಾವಣಾ ಗುರುತಿನ ಚೀಟಿ ಅಂಗವಿಕಲ ಕಾರ್ಡ್ ಅಥವಾ ಪ್ರಮಾಣ ಪತ್ರ
ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆಯುವ ಈ ಸಮೀಕ್ಷೆಯು, ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ನಿಖರ ಮಾಹಿತಿ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಈ ಕುರಿತು ಸಾರ್ವಜನಿಕರು ಸಹಕರಿಸುವಂತೆ ಆದೇಶದಲ್ಲಿ ಕೋರಲಾಗಿದೆ.

