ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಇನ್ನು ನೆನಪು ಮಾತ್ರ. 94 ವರ್ಷ ಪ್ರಾಯದ ಇವರು ವಯೋಸಹಜ ಕಾಯಿಲೆ ಇಂದ ಮೃತ ಪಟ್ಟಿದ್ದಾರೆ.
ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.
ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 20-08-1931 ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿಕೊಂಡರು
ಭೈರಪ್ಪನವರು ಕನ್ನಡ ನಾಡು ಕoಡ ಶ್ರೇಷ್ಠ ಬರಹಗಾರ. ಕನ್ನಡ ಸಾಹಿತ್ಯ ಲೋಕದ ರತ್ನ. ಗೊರೂರು ರಾಮಸ್ವಾಮಿ ಅಯ್ಯಂಗಾರರಿಂದ ಪ್ರಭಾವಿತರಾಗಿ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ ಇವರು ನೂರಾರು ಕೃತಿಗಳನ್ನು ಬರೆದು ಸಾಹಿತ್ಯ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಗ್ರಹಭಂಗ, ಆವರಣ, ವಂಶವ್ರಕ್ಷ, ದಾಟು, ನಾಯಿ ನೆರಳು, ಮತದಾನ ಇವು ಅವರ ಪ್ರಮುಖ ಕೃತಿಗಳು.
ಭೀತ್ತಿ ಅವರ ಆತ್ಮ ಕಥನ.
ಇವರಿಗೆ ಪದ್ಮಭೂಷಣ ಪ್ರಶಸ್ತಿ ಕೂಡ ಲಭಿಸಿದೆ

