ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ರಾಜ್ಯದ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಮ್ಮ ನಿರೀಕ್ಷೆಯಂತೆ ಸಮೀಕ್ಷೆಗಳು ಪೂರ್ಣಗೊಂಡಿಲ್ಲ. ಹಾಗಾಗಿ ಶಿಕ್ಷಕರು ಕೂಡ ಇನ್ನಷ್ಟು ದಿನ ಸಮೀಕ್ಷೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆಯಲ್ಲಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಇನ್ನಷ್ಟು ದಿನಗಳ ಕಾಲ ದಸರಾ ರಜೆ ವಿಸ್ತರಣೆ ಮಾಡಲಾಗುವುದು. ಅಕ್ಟೋಬರ್ 18ರವರೆಗೆ ದಸರಾ ರಜೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ನಾಳೆಯಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ಇರಲಿದೆ. ಅರ್ಧವಾರ್ಷಿಕ ಪರೀಕ್ಷೆಗೆ ತೊಡಗಿಸಿಕೊಳ್ಳುವ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಿಕ್ಷಕರು ಸಮೀಕ್ಷೆಯಲ್ಲಿ ಭಾಗವಹಿಸಬೇಕು. 12 ದಿನಗಳ ಒಳಗಾಗಿ ಸಮೀಕ್ಷೆ ಸಂಪೂರ್ಣವಾಗಿ ಮುಗಿಯಬೇಕು. ಸುಮಾರು 1 ಲಕ್ಷ 20 ಸಾವಿರ ಶಿಕ್ಷಕರು ಸಮೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading