ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆ ಬಗ್ಗೆ ಜಿಲ್ಲಾಧಿಕಾರಿ ಸೂಚನೆ

ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧತೆಯಿಂದ ಹೆಚ್ಚಿನ ಗಾಳಿ ಮಳೆಯ ಸಾಧ್ಯತೆ.
ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ.ಬೆಂಗಳೂರು ಇವರ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರಗಳ ಕಾಲ ಸಮುದ್ರ ಪ್ರಕ್ಷುಬ್ದತೆಯಿಂದ ಇದು ಈ ದಿನಗಳಲ್ಲಿ ಹೆಚ್ಚಿನ ಗಾಳಿ ಮಳೆ (ಗಂಟೆಗೆ ಸುಮಾರು 45 – 55 ಕಿ.ಮೀ) ಬರುವ ಸಾಧ್ಯತೆಯಿದ್ದು ಹಾಗೂ ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.

ಈಗಾಗಲೇ ಮೀನುಗಾರಿಕೆಗೆ ಹೋಗಿ ಸಮುದ್ರದಲ್ಲಿರುವವರು ಸುರಕ್ಷಿತ ದಡ ಸೇರುವುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading