ಕಲಾ ಪ್ರತಿಭೋತ್ಸವಕ್ಕೆ ಅಜಿ೯ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯು ಮಕ್ಕಳು ಮತ್ತು ಯುವ ಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸುವ ಸಲುವಾಗಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಮತ್ತು ಪ್ರತಿಭಾನ್ವಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಸ್ಪರ್ಧೆಗಳಿಗೆ ಭಾಗವಹಿಸುವವರು ಅರ್ಜಿಯನ್ನು ದಿನಾಂಕ 30-10/2025ರ ಸಂಜೆ ಗಂಟೆ 5ರ ಒಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಡಾ. ಶಿವರಾಂ ಕಾರಂತ್ ಕಲಾಗ್ರಾಮ ಪ್ರಗತಿನಗರ ಅಲೆವೂರು ಗ್ರಾಮ, ಮಣಿಪಾಲ ಅಂಚೆ ಉಡುಪಿ ಜಿಲ್ಲೆ ಇವರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಕಳುಹಿಸಬಹುದಾಗಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ 08202986168 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading