ಶೊರಿನ್- ಆರ್ ವೈ ಯು ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂಗ್ತ್ ಟ್ರೈನಿಂಗ್ & ಎಂ.ಕೆ. ಅನಂತರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಶನ್ ಮೂಡುಬಿದಿರೆ ಇವರ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ 8ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್-2025 ರಲ್ಲಿ ಮಯ್ಯಾಡಿ (ಉಡುಪಿ) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಾಗರ್ ಎಸ್. ನಾಯಕ್ ಕುಮಿಟೆಯಲ್ಲಿ ಪ್ರಥಮ ಸ್ಥಾನ ಹಾಗೂ 4ನೇ ತರಗತಿಯ ತಕ್ಷಕ್ ಶೆಟ್ಟಿ ಕಟಾ ಮತ್ತು ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

