ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು. ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜಿನಲ್ಲಿ ಮೂರು ದಿನಗಳ ಕಾಲ ನಡೆದ ಬಾಲಕ-ಬಾಲಕಿಯರ ನೆಟ್‌ಬಾಲ್ ಪಂದ್ಯಾಟದಲ್ಲಿ ರಾಜ್ಯದ 27 ಬಾಲಕರ ತಂಡಗಳು ಮತ್ತು 25 ಬಾಲಕಿಯರ ತಂಡಗಳು ಭಾಗವಹಿಸಿದ್ದು 17 ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ರಾಷ್ಟ್ರಮಟ್ಟದ ನೆಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾರೆ, ವಿದ್ಯಾರ್ಥಿಗಳಿಗೆ ಕೊಲ್ಲೂರು ದೇಗುಲದ ಅಧ್ಯಕ್ಷರಾದ ಬಾಬು ಹೆಗ್ಡೆ ಸೇರಿದಂತೆ ಶಿಕ್ಷಕ ಭಾಂದವರು,ವಿದ್ಯಾರ್ಥಿಗಳು ಊರಿನವರು ಅಭಿನಂದನೆ ಸಲ್ಲಿಸಿದ್ದಾರೆ

