ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ. 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ಪೃಕೃತಿ ಮಾತೆ ಎನಿಸಿದ್ದರು

