ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿ ಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಕಾಯಂ ಗುತ್ತಿಗೆ ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆ ಸೌಲಭ್ಯವನ್ನು ನೀಡುವುದಾಗಿ ಸರಕಾರಿ ಆದೇಶದಲ್ಲಿ ಮಂಜೂರು ಮಾಡಲಾಗಿದೆ.
ಋತುಚಕ್ರ ಹೊಂದಿರುವ 18ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರು ಈ ರಜೆಯನ್ನು ಪಡೆಯಲು ಅರ್ಹರಿತ್ತಾರೆ
ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು, ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ
ಈ ರಜೆಯನ್ನು ರಜೆ ಅಥವಾ ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು ಮತ್ತು ಈ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶ ಹೊರಡಿಸಿದೆ

