ಉಪ್ಪುಂದ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪಶ್ಚಿಮ ಕರಾವಳಿಯ ಪೌರಾಣಿಕ ಹಿನ್ನೆಲೆ ಹೊಂದಿರುವ ಪರಶುರಾಮ ಕ್ಷೇತ್ರದ ಪ್ರಮುಖವಾದ ದೇಗುಲಗಳಲ್ಲಿ ದುರ್ಗಾ ಪರಮೇಶ್ವರಿ ದೇವಸ್ಥಾನವೂ ಒಂದು.
ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯು ತಾಲ್ಲೂಕಿನಲ್ಲಿ ನಡೆಯುವ ಅತಿ ದೊಡ್ಡ ಜಾತ್ರೆ ಎಂದೇ ಪ್ರಸಿದ್ದಿ ಪಡೆದಿರುವ ಉಪ್ಪುಂದ ಜಾತ್ರೆಯನ್ನು ಈ ಭಾಗದಲ್ಲಿ ಕೊಡಿಹಬ್ಬ ಎಂತಲೂ ಕರೆಯುತ್ತಾರೆ. ಮೂರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಸೇರಿ ತಾಯಿ ದುರ್ಗಾಪರಮೇಶ್ವರಿಯ ಆರಾಧನೆ ಮಾಡಿ ಕೃತಾರ್ಥರಾಗುತ್ತಾರೆ.



