ಬೈಂದೂರು : ಸಹಕಾರಿ ಸಂಘಗಳಿಗೆ ಸದೃಢ ನಾಯಕತ್ವ ದೊರೆತರೆ ಶೀಘ್ರ ಬೆಳವಣಿಗೆಗೆ ಸಾಧ್ಯವಾಗುತ್ತದೆ ಎನ್ನವುದಕ್ಕೆ ಬೈಂದೂರಿನ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಾಕ್ಷಿ. ಈ ಸಂಸ್ಥೆ ಆರಂಭಗೊಂಡು ಅತ್ಯಂತ ಕಡಿಮೆ ಅವಧಿ ಯಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸುವ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು.
ಭಾನುವಾರ ಬೈಂದೂರಿನ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನೂತನ ಮರವಂತೆ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕೇಂದ್ರ ಕಚೇರಿ ಸೇರಿದಂತೆ ಆರು ಶಾಖೆಗಳನ್ನು ಹೊಂದಿದ್ದು, ನೂರಾರು ಕೋಟಿ ರೂ. ಆರ್ಥಿಕ ವಹಿವಾಟು ನಡೆಸುತ್ತಿದೆ. ಸಮಾಜ ದಲ್ಲಿದುರ್ಬಲರಿಗೆ, ಮಹಿಳೆಯರಿಗೆ ಆರ್ಥಿಕ ಸಹಕಾರ ನೀಡಿ ಸ್ವಾವಲಂಬಿ ಬದುಕು ಕಲ್ಪಿಸಿಕೊಡುವ ಮಹತ್ತರ ಕಾರ್ಯ ಮಾಡುವುದಲ್ಲದೇ ಸಂಘದ ಲಾಭಾಂಶದಲ್ಲಿ ಹಲವು ಸಮಾಜಮುಖಿ ಕೈಂಕರ್ಯಗಳನ್ನು ಸಂಘಟಿಸುವ ಮೂಲಕ ಮಾದರಿ ಕಾರ್ಯಮಾಡುತ್ತಿದೆ ಎಂದರು.

ಮಾಜಿ ಶಾಸಕ ಜೆ.ಡಿ. ನಾಯ್ಕ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ನಾರಾಯಣ ಹೆಗ್ಡೆ, ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬುಶೆಟ್ಟಿ, ಬೈಂದೂರು ಒತ್ತಿನೆಣೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಸೂಲಿಯಣ್ಣ ಶೆಟ್ಟಿ, ಗೋಕುಲ್ ಶೆಟ್ಟಿ ಕುಂದಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಜಿಲ್ಲಾ ಸೌಹಾರ್ದ ಒಕ್ಕೂಟದ ನಿರ್ದೇಶಕ ಮಂಜುನಾಥ, ಸೌಹಾರ್ದ ಸಹಕಾರಿಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ವಿಜಯ, ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಚಂದ್ರಶೇಖರ್, ಮರವಂತೆ ಗ್ರಾಪಂ ಅಧ್ಯಕ್ಷ ನಾಗರಾಜ ಖಾರ್ವಿ, ಕಟ್ಟಡ ಮಾಲೀಕ ಚಂದ್ರ ಖಾರ್ವಿ, ವಾಸುದೇವ ಯಡಿಯಾಳ್ ಸೇರಿದಂತೆ ಸಂಘದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.
ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.

