ಜಿಲ್ಲೆಯಲ್ಲಿ ಲಸಿಕಾ ಕಾರ್ಯಪಡೆ ಸಮಿತಿ ಸಭೆಯನ್ನು ನಡೆಸಿ ದಿನಾಂಕ 21-12-2025 ರಂದು ಜಿಲ್ಲೆಯ ಎಲ್ಲಾ ಐದು ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಿಸುವಂತೆ ಕ್ರಮವಹಿಸಲು ಸೂಚಿಸಲಾಯಿತು. ಅಲ್ಲದೆ ಲಸಿಕೆಯಿಂದ ವಂಚಿತರಾದ ಮಕ್ಕಳಿಗೆ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಡಿಸೆಂಬರ್ 22 & 23 ಮತ್ತು ನಗರ ಪ್ರದೇಶಗಳಲ್ಲಿ ಡಿಸೆಂಬರ್ 22, 23 & 24ರಂದು ಪೋಲಿಯೋ ಲಸಿಕೆಯನ್ನು ಹಾಕಲು ಕ್ರಮವಹಿಸುವಂತೆ ಸೂಚಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದೆ ಶೇಕಡಾ 100ರಷ್ಟು ಪ್ರಗತಿ ಸಾಧಿಸಲು ವಿವಿಧ ಇಲಾಖೆಗಳು ಸಹಕರಿಸಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು.


