ಬೈಂದೂರು : ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಬೈಂದೂರು ತಾಲೂಕು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಉದ್ಘಾಟನೆ ಕುರಿತು ಶುಕ್ರವಾರ ಬೆಳಗಾವಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಉದ್ಘಾಟನೆಗೆ ದಿನಾಂಕವನ್ನು ಅಂತಿಮ ಪಡಿಸಿಕೊಂಡು ಹಾಗೂ, ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಚರ್ಚಿ ನಡೆಸಿದರು.
ಇದೇ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶಗಳಿಗೆ ಹಾಗೂ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಹೆಚ್ಚುವರಿ ಬಸ್ ಸೌಲಭ್ಯ ನೀಡಲು ಮನವಿ ನೀಡಿದರು.

