ಬೈಂದೂರು: ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳನ್ನು ಭೇಟಿ ಮಾಡಿ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಠಾಣಾ ಎ ಎಸ್ ಐ ರಾಮು ಹೆಗ್ಡೆ ಅವರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳು ಮತ್ತು ಕಾನೂನು ಪಾಲನೆ ಬಗ್ಗೆ ಅರಿವನ್ನು ಮೂಡಿಸಿ ಹಾಗೆ ಮಕ್ಕಳ ಸುರಕ್ಷತೆ, ಸೈಬರ್ ಕ್ರೈಂ ಗಳ ಬಗ್ಗೆ ಮತ್ತು ಸೈಬರ್ ಸಹಾಯವಾಣಿ 1930, ತುರ್ತು ಸಹಾಯವಾಣಿ 112 ಬಗ್ಗೆ ಮಾಹಿತಿ ನೀಡಿದರು.

ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ನೆಟ್ ಅನ್ನೋದು ಮಾನವ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಇದರೊಂದಿಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಲೆ ಇದೆ. ಕಂಪ್ಯೂಟರ್, ಮೊಬೈಲ್, ಇಂಟರ್ನೆಟ್ ಮೂಲಕ ನಡೆಯುವ ಅಕ್ರಮ ಚಟುವಟಿಕೆಗಳು ಸೈಬರ್ ಅಪರಾಧದ ಕುರಿತು ಅರಿವು ಹೊಂದಿರುವುದು ಬಹಳ ಮಹತ್ವದ್ದಾಗಿದೆ.
ಬ್ಯಾಂಕ್ ವಂಚನೆ ಆನ್ಲೈನ್ ಮೋಸ ಹ್ಯಾಕಿಂಗ್ ಸಾಮಾಜಿಕ ಜಾಲತಾಣ ದುರುಪಯೋಗ ಮುಂತಾದ ಅಪಾಯಗಳಿಂದ ನಮ್ಮನ್ನು ಕಾಪಾಡಿಕೊಳ್ಳಲು ಜಾಗೃತಿ ತುಂಬಾ ಅಗತ್ಯ. ಸೈಬರ್ ಅಪರಾಧಗಳ ಬಗ್ಗೆ ತಿಳುವಳಿಕೆ ಹೊಂದುವುದರಿಂದ ಮಕ್ಕಳು ಹಾಗೂ ಹಿರಿಯ ನಾಗರಿಕರು ಸುರಕ್ಷಿತವಾಗಿ ಇಂಟರ್ನೆಟ್ ಬಳಕೆ ಮಾಡಬಹುದು. ಸರ್ಕಾರ ಹಾಗೂ ಪೊಲೀಸ್ ಇಲಾಖೆಗಳು ಸೈಬರ್ ಅಪರಾಧ ತಡೆಗಾಗಿ ಕಾನೂನುಗಳನ್ನು ಜಾರಿಗೆ ತಂದಿದ್ದು ಜನರು ಸಹಕಾರ ನೀಡುವುದು ಅತಿ ಮುಖ್ಯ ಎಂದು ಹೇಳಿದರು. ಹಾಗೆ ಮಕ್ಕಳಲ್ಲಿ ಇಂತಹ ಅಪರಾಧಗಳು ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಇತರ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading