ಬೈಂದೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ಇವರ ವತಿಯಿಂದ ಬೈಂದೂರು ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವು ಡಿಸೆಂಬರ್ 27 ರಂದು ಬೆಳಗ್ಗೆ 11.30 ಕ್ಕೆ ಬೈಂದೂರು ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ನಡೆಯಿತು
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರಾದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ ಗೈದು ಮಾತನಾಡಿ ಬೈಂದೂರು ಜನತೆಯ ಬಹುದಿನಗಳ ಕನಸು ಈಡೇರುತ್ತಿರುವುದು ಸಂತಸ ತಂದಿದೆ, ಮುಂದಿನ ದಿನಗಳಲ್ಲಿ ಕೆ ಎಸ್ ಆರ್ ಟಿ ಸಿ ಡಿಪೋ ಮಾಡುವ ಬಗ್ಗೆ ಭರವಸೆ ನೀಡಿದರು

ಸಭಾ ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ,ಕೆ ಎಸ್ ಆರ್ ಟಿ ಸಿ ನಿಗಮದ ಮಾಜಿ ಅಧ್ಯಕ್ಷ ಗೋಪಾಲ ಪೂಜಾರಿ,ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಕೊಲ್ಲೂರು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಹೆಗಡೆ,ಬೈಂದೂರು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ, ದಿನೇಶ್ ಹಳ್ಳಿಹೊಳೆ,ರಾಜು ಪೂಜಾರಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ಸುರೇಶ್ ಬಟವಾಡಿ, ಮಂಗಳೂರು ವಿಭಾಗದ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ, ಕುಂದಾಪುರ ಘಟಕ ವ್ಯವಸ್ಥಾಪಕ ಉದಯ ಶೆಟ್ಟಿ ಹಾಗೂ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

