ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ ಕಲೆ ಸಾಹಿತ್ಯ ಸಂಗೀತ ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನ ಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ ಶಿಲ್ಪ ಕಲಾ ಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025 26ನೇ ಸಾಲಿನ ಸಾಮಾನ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಸೇವಾ ಸಿಂಧು ಮುಖಾಂತರ ದಿನಾಂಕ ಡಿಸೆಂಬರ್ 1 2025 ರಿಂದ ಡಿಸೆಂಬರ್ 30 2025 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು

ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಕಾಲಾವಧಿಯನ್ನು 10 ದಿನಗಳು ವಿಸ್ತರಿಸಿ ಅಂದರೆ 31 ಡಿಸೆಂಬರ್ 2025 ರಿಂದ ಜನವರಿ 9 2026ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸಲಾಗುವುದಿಲ್ಲ)

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading