ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ (Ajit Pawar) ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದ ವಿಮಾನವೊಂದು ಇಂದು ಬೆಳಗ್ಗೆ ಮಹಾರಾಷ್ಟ್ರದ ಪುಣೆಯಲ್ಲಿ ಅಪಘಾತಕ್ಕೀಡಾಗಿ ಎಲ್ಲರೂ ಸಾವನ್ನಪ್ಪಿದ್ದಾರೆ. ದೆಹಲಿ ಮೂಲದ ವಿಎಸ್‌ಆರ್ ವೆಂಚರ್ಸ್ ನಿರ್ವಹಿಸುತ್ತಿದ್ದ ಲಿಯರ್‌ಜೆಟ್ 46 ಮುಂಬೈನಿಂದ ಟೇಕ್ ಆಫ್ ಆದ 35 ನಿಮಿಷಗಳ ನಂತರ ಇಂದು ಬೆಳಿಗ್ಗೆ 8.45ರ ಸುಮಾರಿಗೆ ಪತನವಾಗಿದೆ.

ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಮಾತ್ರವಲ್ಲದೆ ಅಜಿತ್ ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ಫ್ಲೈಟ್ ಅಟೆಂಡೆಂಟ್ ಮತ್ತು ಇಬ್ಬರು ಸಿಬ್ಬಂದಿ (ಇಬ್ಬರು ಪೈಲಟ್ಗಳು) ಕೂಡ ಈ ದುರಂತದಲ್ಲಿ ಮೃತಪಟ್ಟಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ. ದಟ್ಟ ಮಂಜಿನಿಂದಾಗಿ ಏನೂ ಗೋಚರವಾಗದ ಪರಿಸ್ಥಿತಿ ಇದ್ದುದರಿಂದ ಪೈಲಟ್ ತುರ್ತು ಲ್ಯಾಂಡಿಂಗ್ಗೆ ಪ್ರಯತ್ನಿಸುತ್ತಿದ್ದರು.
ಆದರೆ, ಅಷ್ಟರಲ್ಲೇ ವಿಮಾನ ಅಪಘಾತಕ್ಕೀಡಾಗಿದೆ. ಪತನದ ಬಳಿಕ ವಿಮಾನಕ್ಕೆ ಬೆಂಕಿ ತಗುಲಿದೆ. ಇದರಿಂದ ವಿಮಾನದಲ್ಲಿದ್ದ ಎಲ್ಲರ ದೇಹವೂ ಛಿದ್ರವಾಗಿತ್ತು

