ತೆಂಗಿನಕಾಯಿ ಕೀಳುವ ವೇಳೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸಾವು

ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಕೂಲಿ ಕಾರ್ಮಿಕರೊಬ್ಬರು ತೆಂಗಿನಮರ ಹತ್ತಿ ಕಾಯಿಗಳನ್ನು ಕೀಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತ ಪಟ್ಟಿರುವರು
ಮೃತರು ರಾಜೀವ ಶೆಟ್ಟಿ 58 ವರ್ಷ ಎಂದು ಗುರುತಿಸಲಾಗಿದೆ.
ಕೆಳಗೆ ಬಿದ್ದ ಸಂದರ್ಭದಲ್ಲಿ ಕುತ್ತಿಗೆ ಹಿಂಬಾಗಕ್ಕೆ ಮತ್ತು ಕಾಲಿಗೆ ಗಂಭೀರ ಗಾಯಗೊಂಡು ತಕ್ಷಣ ಕುಂದಾಪುರ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading