ರಾಜ್ಯದಲ್ಲಿ ಚುರುಕುಗೊಂಡ ಇ ಸ್ವತ್ತು ಪ್ರಕ್ರಿಯೆ

ರಾಜ್ಯದಲ್ಲಿ ‘ಇ-ಸ್ವತ್ತು 2.0′ ತಂತ್ರಾಂಶದಡಿ ಇದುವರೆಗೆ 1,14,907 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ’ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇಲಾಖೆಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಅವರು, ‘ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗೆ ಬಾಕಿ ಇವೆ’ ಎಂದು ಮಾಹಿತಿ ನೀಡಿದ್ದಾರೆ.

‘ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್‌ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದಿಸುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಈ ಬಗ್ಗೆ ಕಳೆದ ಜನವರಿಯಲ್ಲಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್‌ ಖಾತೆಯ ಸಚಿವರಿಗೆ ಪತ್ರ ಬರೆಯಲಾಗಿತ್ತು. ಬಳಿಕ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

“ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯಿತಿ ಹಂತದಲ್ಲಿ ಅವಕಾಶ ನೀಡಲಾಗಿದೆ. ಈವರೆಗೆ 478 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 54 ಅರ್ಜಿಗಳಿಗೆ ಗ್ರಾಮ ಪಂಚಾಯಿತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading