ಸಂಭ್ರಮದಿಂದ ಜರಗಿದ ಶ್ರೀ ಕ್ಷೇತ್ರ ಕೊಲ್ಲೂರು ರಥೋತ್ಸವ

ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮಹಾರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದ ಅಂಗವಾಗಿ ಮಂಗಳಾರತಿ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.

ರಥಪೂಜೆ ನಡೆಸಿ ಬಳಿಕ ಶ್ರೀದೇವಿಗೆ ಪೂಜೆ ನೆರವೇರಿಸಿ ಮಂಗಳಾರತಿ ಎತ್ತಿ ಸೇರಿದ ಸಾವಿರಾರು ಜನರು ಶ್ರೀದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು.
ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ಹಲವೆಡೆಯಿಂದ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading