ಬೈಂದೂರು: ಬೈಂದೂರು ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಬೈಂದೂರು ವೃತ್ತ ನಿರೀಕ್ಷಕರು ಮತ್ತು ಬೈಂದೂರು ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಭೆ ನಡೆಸಿದ್ದು ಸದ್ರಿ ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರುಗಳಿಗೆ ಶಾಂತಿಯುತವಾಗಿ ಕಾನೂನು ನಿಯಮಗಳನ್ನು ಪಾಲಿಸಿ ಹಬ್ಬವನ್ನು ಆಚರಿಸುವಂತೆ ತಿಳಿಸಿ ಸೂಕ್ತ ಸಲಹೆ ಸೂಚನೆ ನೀಡಲಾಯಿತು.

