ಕುಂದಾಪುರದ ಭಂಡಾರಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರದಲ್ಲಿ ಇದೆ ಏಪ್ರಿಲ್ 2ನೇ ತಾರೀಕಿನಂದು ರಾಜ್ಯದ ಯುವ ಜನತೆಗೆ ಉದ್ಯೋಗ ನೀಡುವ ಪ್ರಯತ್ನದೊಂದಿಗೆ ಬೃಹತ್ ಉದ್ಯೋಗ ಮೇಳ ಉಡುಪಿ 2026 ಹಮ್ಮಿಕೊಳ್ಳಲಾಗಿದೆ.
ಈ ಉದ್ಯೋಗ ಮೇಳವು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆ, ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಮತ್ತು ಭಂಡಾರಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ 2026 ಏಪ್ರಿಲ್ 2ನೇ ತಾರೀಕಿನಂದು ಗುರುವಾರ ಬೆಳಿಗ್ಗೆ 9:30ರಿಂದ ಸಂಜೆ 5:30ರ ತನಕ ಭಂಡಾರ್ಕರ್ಸ್ ಕಾಲೇಜು ಆವರಣದಲ್ಲಿ ಆಯೋಜನೆಗೊಳ್ಳಲಿದೆ.
ಈ ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಸಾವಿರಾರು ಉದ್ಯೋಗವಕಾಶಗಳು ಲಭ್ಯವಿದ್ದು ಇಂದೇ ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ವೆಬ್ಸೈಟ್ udupi.nic.in ಉದ್ಯೋಗ ಮೇಳ 2026 ಲಿಂಕ್ ಬಳಸಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಅವಕಾಶ
ಅಭ್ಯರ್ಥಿಗಳಿಗೆ ಸೂಚನೆ: ಮೂಲ ದಾಖಲೆಗಳು, ನಕಲು ಪ್ರತಿಗಳು, ಆಧಾರ್ ಕಾರ್ಡ್, ಮತ್ತು ಇತ್ತೀಚಿನ 5-6 ಫೋಟೋಗಳೊಂದಿಗೆ ರೆಸ್ಯೂಮ್ ನೊಂದಿಗೆ ಬನ್ನಿ.


