ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ಇದರ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಎ.16 ರಿಂದ 24 ರ ವರೆಗೆ ನಡೆಯಲಿರುವ ಮನ್ಮಹಾರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬುಧವಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರಿನಲ್ಲಿ ನಡೆಯಿತು.

ಸೇನೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಬೈಂದೂರು ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ದೇವಸ್ಥಾನದ ಅರ್ಚಕ ರಾಜೇಶ್ ಐತಾಳ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಸ್‌.ಜಯರಾಮ ಯಡ್ತರೆ,ಪ್ರಶಾಂತ ಕುಮಾ‌ರ್ ಶೆಟ್ಟಿ,ಶಾಂತಾ ಆಚಾರ್ಯ,ದೊಟ್ಟಯ್ಯ ಪೂಜಾರಿ ಬೆಳ್ಳಲ್‌ಕಟ್ಟೆ,ಇಂದಿರಾ ಕೊಠಾರಿ,ಪರಮೇಶ್ವರ್ ಪಟವಾಲ್,ವಸಂತ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading