ಎಸೆಸೆಲ್ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಉಡುಪಿ ಜಿಲ್ಲೆಯ ಪ್ರೀತಮ್ ಪೂಜಾರಿ

ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದ‌ರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರೀತಮ್ ಪೂಜಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ಜೊತೆಯಲ್ಲಿ ಒಟ್ಟು ಏಳು ಮಂದಿ ಗರಿಷ್ಠ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.

ಪ್ರೀತಮ್‌ ಬಿದ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನಾ ದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯ ಪುತ್ರ. ತಂದೆ ಗಣಪತಿಯವರು ಶ್ರೀ ಲಕ್ಷ್ಮೀ ಎಕ್ಸ್ ಪ್ರೆಸ್ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್. ತಾಯಿ ನಾಗರತ್ನಾ ಗೃಹಿಣಿ. ಎಲ್.ಕೆ.ಜಿ.ಯಿಂದಲೂ ಈತ ಮದರ್ ಥೆರೆಸಾ ಸಂಸ್ಥೆಯಲ್ಲಿ ಕಲಿಯುತಿದ್ದು, ಆತನ ಸಾಧನೆಯನ್ನು ಕಂಡು ಶಾಲೆಯ ಶಿಕ್ಷಕರು,ಊರಿನವರು,ಮನೆಯವರು ಹರ್ಷ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯಲ್ಲಿ ಅಭಿನಂದನೆಗಳ ಮಹಾಪೂರವೆ ಹರಿದುಬಂದಿದೆ.

Copy link
URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading