ಬಸ್ ತಂಗುದಾಣದಲ್ಲಿ ಮಹಿಳೆಯೊಬ್ಬರು ಬಸ್ ಹತ್ತುವಾಗ ಚಿನ್ನ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಎಪ್ರಿಲ್ 27ರಂದು ಬೈಂದೂರು ತಾಲೂಕು ಆಡಳಿತ ಸೌಧದ ಎದುರಿನ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.
ಮಧ್ಯಾಹ್ನ ಮಹಿಳೆಯೊಬ್ಬರು ಬಸ್ ಪ್ರಯಾಣಿಕರ ತಂಗುದಾಣದಲ್ಲಿ ಭಟ್ಕಳ ಕಡೆಗೆ ಪ್ರಯಾಣಿಸಲು ಬಸ್‌ಗಾಗಿ ಕಾದು ಕುಳಿತಿದ್ದರು. ಈ ಸಮಯದಲ್ಲಿ ಹತ್ತಾರು ಪ್ರಯಾಣಿಕರಿದ್ದರು.

ಮಹಿಳೆ ಬಸ್ ಹತ್ತುವ ಸಮಯದಲ್ಲಿ ಪ್ರಯಾಣಿಕರ ಸಾಮಾನ್ಯ ನೂಕು ನಗ್ಗಲು ಇದ್ದಿತ್ತು. ಈ ಸಮಯದಲ್ಲಿ ಮಹಿಳೆಯ ಕೈಯಲ್ಲಿದ್ದ ಚಿನ್ನದ ಬಳೆಯನ್ನು ಆಯುಧದಿಂದ ಕಟ್ ಮಾಡಿ ಕಳ್ಳತನಕ್ಕೆ ಯತ್ನಿಸಲಾಯಿತು. ಮಹಿಳೆ ಬೊಬ್ಬೆ ಹಾಕಿದಾಗ ವ್ಯಕ್ತಿ ಓಡತೊಡಗಿದ ಸಾರ್ವಜನಿಕರು ಬೆನ್ನಟ್ಟಿ ಆತನನ್ನು ಹಿಡಿದರು.

URL has been copied successfully!