ಪ್ರವಾಸಕ್ಕೆಂದು ತೆರಳಿದ ಬಸ್ ಮರವಂತೆ ಬಳಿ ಅಪಘಾತ: ಇರ್ವರ ಮೃತ್ಯು ಹಲವರಿಗೆ ಗಾಯ

ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಎಂಬಲ್ಲಿ ನಡೆದಿದೆ
ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ಹಂತದ ಬಿಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಹೊರಟಿದ್ದು, ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರಿದ್ದರು
ಇವರೆಲ್ಲ ಮುರ್ಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಇಂದು ಬೆಳಗ್ಗೆ ಉಡುಪಿ ಕಡೆ ಬಸ್ಸಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ರಸ್ತೆ ಬದಿ ನಿಲ್ಲಿಸಿದ ಗ್ಯೂಡ್ಸ ಗಾಡಿಗೂ ಡಿಕ್ಕಿ ಹೊಡೆದಿದೆ
ಇದರಿಂದ ಬಸ್ಸಿನ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕರೊಬ್ಬರು ಮೃತಪಟ್ಟರೆಂದು ತಿಳಿದುಬಂದಿದೆ. ಉಳಿದಂತೆ ಹಲವು ವಿದ್ಯಾರ್ಥಿಗಳು ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Copy link
URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading