ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಉಡುಪಿ ಜಿಲ್ಲೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯಕ್ಕೆ ಅಧಿಸೂಚಿಸಲಾಗಿರುತ್ತದೆ.
ಇಲಾಖೆ ಸೂಚಿಸಿರುವ ಅಂಶಗಳ ಆಧಾರದ ಮೇಲೆ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ವ್ಯವಸಾಯ ಸೇವಾ ಸಹಕಾರಿ ಸಂಘ, ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರಗಳಲ್ಲಿ ಬ್ಯಾಂಕ್ ಖಾತೆ ಸಂಖ್ಯೆ ಆಧಾರ ಸಂಖ್ಯೆ ಮತ್ತು ಬೆಳೆ ಸಮೀಕ್ಷೆ ತಂತ್ರಾಂಶದ ಬೆಳೆ ವಿಸ್ತಿರ್ಣದ ಆಧಾರದ ಮೇಲೆ ವಿಮೆ ಮೊತ್ತವನ್ನು ನೀಡಿ ಅಗ್ರಿಕಲ್ಚರ್ ಇನ್ಸೂರೆನ್ಸ್ ವಿಮಾ ಕಂಪನಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಇಲಾಖ ಆದೇಶದಂತೆ ಜುಲೈ ಒಂದು 2026 ರಿಂದ ಜೂನ್ 30 2018 27ರವರೆಗೆ ವಿಮೆ ರಕ್ಷಣೆಯ ಅವಧಿ ಇರುತ್ತದೆ ಸದರಿ ಅವಧಿಯಲ್ಲಿ ಹವಾಮಾನ ವೈಪರಿತ್ಯಗಳಿಂದಾಗಿ ಬೆಳೆ ನಷ್ಟ ಉಂಟಾದಲ್ಲಿ ವಿಮೆ ರಕ್ಷಣೆಯ ಅವಧಿಯ ನಂತರದಲ್ಲಿ ವಿಮಾ ಪರಿಹಾರ ಲೆಕ್ಕಾಚಾರ ಮುಗಿದ ಒಂದು ತಿಂಗಳಿನೊಳಗಾಗಿ ವಿಮಾ ಕಂಪನಿಯು ನಷ್ಟ ಪರಿಹಾರವನ್ನು ಪಾವತಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಳಿಗಾಗಿ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ, ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು, ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading