ರಾಜ್ಯದಲ್ಲಿ ಮಳೆ ಇಲ್ಲದೆ ಬೇಸರಗೊಂಡಿದ್ದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡುತ್ತಿದೆ. ರಾಜ್ಯದಲ್ಲಿ ಮುಂಗಾರು ಅಲ್ಲಲ್ಲಿ ಚುರುಕುತನ ಕಂಡಿದ್ದು ಭಾನುವಾರ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮತ್ತೆ ದೇಶದ ಹೆಚ್ಚಿನ ಭಾಗಗಳಲ್ಲಿ ಸಂಪೂರ್ಣ ಸ್ಥಗಿತಗೊಂಡಂತಿರುವ ಮಾನ್ಸೂನ್ ಮತ್ತೆ ಪುನರ್ ಆಗಮನಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 21ರಿಂದ ಜೂನ್ 25ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ, ಹಾಗೆ ಜೂನ್ 22 ಮತ್ತು ಜೂನ್ 23ರಂದು ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

