ಹೆಮ್ಮಾಡಿ ಸಮೀಪದ ಸುಳ್ಸೆಯಲ್ಲಿ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ವಿದ್ಯಾರ್ಥಿಗಳಿಗಾಗಿ ನೂತನವಾಗಿ ನಿರ್ಮಾಣಗೊಂಡ ವಸತಿ ನಿಲಯ ಕಟ್ಟಡವನ್ನು ಜೂನ್ 25ರಂದು ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿದುಶೇಖರ ಭಾರತಿ ಶ್ರೀ ಪಾದಂಗಳರು ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿ ಸಂಸ್ಥೆಯ ಶೈಕ್ಷಣಿಕ ಪ್ರಗತಿಯನ್ನು ಪ್ರಶಂಸಿಸಿದರು.

ಕಾರ್ಯಕ್ರಮದ ವಿಶೇಷ ಅಂಗವಾಗಿ 2025 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ರಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ, ಜನತಾ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಶ್ಯಾಮಲಾ ಗಣೇಶ್ ಮೊಗವೀರ, ಕೋಟದ ಜನತಾ ಫಿಶ್ ಮಿಲ್ ಸಂಸ್ಥೆಯ ಮುಖ್ಯಸ್ಥ ಆನಂದ್ ಸಿ ಕುಂದರ್, ವೇದಮೂರ್ತಿ ಲೋಕೇಶ್ ಅಡಿಗ, ಮಾಜಿ ಶಾಸಕ ಗೋಪಾಲ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಎಸ್ ಪೂಜಾರಿ ಉಪಸ್ಥಿತರಿದ್ದರು.

ಗಣೇಶ್ ಮೊಗವೀರ್ ಅವರು ಪ್ರಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿನಿಯರಾದ ಸಿಂಚನ ಜಿ ಭಟ್ ಮತ್ತು ಸಮೃದ್ಧಿ ಶೆಟ್ಟಿ ಆದಿ ಶಂಕರಾಚಾರ್ಯರ ಜೀವನ ಹಾಗೂ ಅವರ ಅಮೂಲ್ಯ ಕೊಡುಗೆಗಳ ಬಗ್ಗೆ ಮಾತನಾಡಿದರು. ಹಾಗೆ ಉಪನ್ಯಾಸಕರಾದ ಉದಯ ನಾಯಕ್ ಸ್ವಾಗತಿಸಿ, ಖ್ಯಾತ ವಾಗ್ಮಿ ದಾಮೋದರ್ ಶರ್ಮ ಕಾರ್ಯಕ್ರಮ ನಿರೂಪಿಸಿದರು

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading