ಭಾರತೀಯ ಹವಮಾನ ಇಲಾಖೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 6ರವರೆಗೆ ಆರೆಂಜ್ ಅಲ್ಲ ಮುನ್ಸೂಚನೆ ನೀಡಿದ್ದು ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿರುತ್ತಾರೆ.

ಸಾರ್ವಜನಿಕರು ಮಳೆ ಗಾಳಿ ಸಿಡಿಲು ಬೀಳುವ ಸಂದರ್ಭದಲ್ಲಿ ಸೂಕ್ತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯಕಾರಿ ಮರ ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.

ಹೆಚ್ಚು ಮಳೆ ಆಗುತ್ತಿರುವ ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ ಹಾಗಾಗಿ ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿ ಉಳಿಯಬಹುದು.

URL has been copied successfully!