ರಾಜ್ಯ ಸರ್ಕಾರದಲ್ಲಿ ಆಡಳಿತಾತ್ಮಕ ದಕ್ಷತೆಯನ್ನು ಹೆಚ್ಚಿಸಲು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಒಂದೇ ಸೂರಿನಡಿ ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮಹತ್ತರ ಹೆಜ್ಜೆಯಿಟ್ಟಿದೆ. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಘೋಷಿಸಿದ್ದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಇಲಾಖೆ’ಯನ್ನು (Praja Seva Department) ಹೊಸದಾಗಿ ಸ್ಥಾಪಿಸಿ ಈಗ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಜೂನ್ 20 ರಂದು ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ , ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ಜೂನ್ 24 ರಂದು ಈ ಹೊಸ ಇಲಾಖೆಯನ್ನು ಸೃಜಿಸಿ ಅಧಿಸೂಚನೆ ಹೊರಡಿಸಿತ್ತು.
ಕರ್ನಾಟಕ ಸರ್ಕಾರವು ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿ ಮತ್ತು ಆಡಳಿತಾತ್ಮಕ ದಕ್ಷತೆ ಹೆಚ್ಚಿಸಲು ‘ಪ್ರಜಾಸೇವಾ ಇಲಾಖೆ’ಯನ್ನು ಹೊಸದಾಗಿ ಸ್ಥಾಪಿಸಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಕುಂದುಕೊರತೆ ವಿಭಾಗ ಮತ್ತು ಸಕಾಲ ಮಿಷನ್ ಅನ್ನು ವಿಲೀನಗೊಳಿಸಲಾಗಿದೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿಪ್ರಜಾಸೇವಾ ಇಲಾಖೆಕೊಠಡಿ ಸಂಖ್ಯೆ:612, 6ನೇ ಮಹಡಿ1ನೇ ಹಂತ, ಬಹುಮಹಡಿಗಳ ಕಟ್ಟಡ -560001ದೂರವಾಣಿ ಸಂಖ್ಯೆ 080-22032825/080-22353985

