ರಾಜ್ಯದಾದ್ಯಂತ ಮುಂಗಾರು ಚುರುಕಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಗಾಳಿ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ, ಉಳಿದೆಡೆ ಅತಿ ಭಾರ ಮಳೆಯ ಆರೆಂಜ್ ಅಲರ್ಟ್ ಇದೆ. ಬಯಲು ಸೀಮೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 9 ರ ಬಳಿಕ ಮತ್ತೆ ಉತ್ತರ ಕರ್ನಾಟಕದಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಯಿದೆ
ನಾಳೆಯ ಹವಾಮಾನ
ನಾಳೆ ಜುಲೈ 7 ರಂದು ದಕ್ಷಿಣ ಕನ್ನಡ-ಉಡುಪಿಗೆ ರೆಡ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ.

ಭೂಕುಸಿತದ ಮುನ್ನೆಚ್ಚರಿಕೆ
ಜುಲೈ 7 ರಿಂದ 11 ರವರೆಗೆ ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading