ಕರ್ನಾಟಕದ ಕರಾವಳಿ ಭಾಗದಲ್ಲಿ ಜುಲೈ 30ರಿಂದ ಆಗಸ್ಟ್ 2ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.

ಮಳೆಯ ಮುನ್ಸೂಚನೆಯಂತೆ ಸಮುದ್ರ ತೀರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ.ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರದ ಅಲೆಗಳ ಅಬ್ಬರವಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕರು ಮಳೆ ಗಾಳಿ ಸಂದರ್ಭದಲ್ಲಿ ಸೂಕ್ತ ಸ್ಥಳದಲ್ಲಿ ಆಶ್ರಯ ಪಡೆದು ಅಪಾಯಕಾರಿ ಮರ ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading