ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ ಸಂವರ್ಧನೆ ಕಲೆ ಸಾಹಿತ್ಯ ಜಾನಪದ ಸಂಗೀತ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ ಅಥವಾ ಶಿಲ್ಪ ಕಲಾ ಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 202627 ನೇ ಸಾಲಿನ ಸಾಮಾನ್ಯ ಮತ್ತು ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಆಗಸ್ಟ್ 20ರ ಒಳಗೆ ಸಲ್ಲಿಸಬೇಕು. ಸರಕಾರದ ಮಾರ್ಗಸೂಚಿಯನ್ನು ಸೇವಾಸಿಂದು ಪೋರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್ http://www.kannadasiri.karnataka.gov.in ಅಳವಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading