ಉಡುಪಿ, ದಕ್ಷಿಣ ಕನ್ನಡ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆಗಸ್ಟ್ 25, 2026ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ರಜೆ ಅನ್ವಯವಾಗಲಿದ್ದು, ಸರ್ಕಾರಿ ಕಚೇರಿಗಳು ಸೇರಿದಂತೆ ರಜಾ ಆದೇಶಕ್ಕೆ ಒಳಪಡುವ ಸಂಸ್ಥೆಗಳಿಗೆ ಇದು ಅನ್ವಯವಾಗಲಿದೆ.

ಮುಸ್ಲಿಂ ಸಮುದಾಯವು ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್ ಮಿಲಾದ್‌ ಆಗಿ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಈದ್ ಮಿಲಾದ್ ಹಬ್ಬದ ಹಾರ್ದಿಕ ಶುಭಾಶಯಗಳು.

URL has been copied successfully!