ಬೈಂದೂರು ತಾಲೂಕು ಬಿಲ್ಲವ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆ ಅಂಗವಾಗಿ ವಾಹನ ಜಾಥಾ ನೆರವೇರಿತು. ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಗೋಪಾಲ್ ಪೂಜಾರಿಯವರು ವಾಹನ ಜಾಥಾಗೆ ಚಾಲನೆ ನೀಡಿದರು.

ಈ ಸಂದರ್ಭ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಉಪಸ್ಥಿತರಿದ್ದರು. ಹಾಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜು ಪೂಜಾರಿ, ಉದ್ಯಮಿಗಳಾದ ಗೋವಿಂದ ಬಾಬು ಪೂಜಾರಿ, ಗುರುರಾಜ್ ಪಂಜು ಪೂಜಾರಿ, ಸುಭಾಷ್ ಪೂಜಾರಿ ತಗ್ಗರ್ಸೆ, ಬೈಂದೂರು ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷರಾದ ಶೇಖರ್ ಪೂಜಾರಿ, ಬಿಲ್ಲವ ಸಂಘದ ಯುವ ಘಟಕದ ಅಧ್ಯಕ್ಷರಾದ ಶೇಖರ್ ಪೂಜಾರಿ, ಮಾಜಿ ತಾಲೂಕ್ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟುವಾಡಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.


