ಕಳವಾಡಿ ಅಂಗನವಾಡಿ ಕೇಂದ್ರದಲ್ಲಿ ಸುಮಾರು 3 ವರ್ಷಗಳ ಕಾಲ ಸೇವೆ ಸಲ್ಲಿಸಿ, ಅದೆಷ್ಟೋ ಮಕ್ಕಳ ಮಾತೃಸ್ವರೂಪಿಯಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶಿಷ್ಠ ಸೇವೆ ಸಲ್ಲಿಸಿ ವರ್ಗಾವಣೆ ಕೊಳ್ಳುತ್ತಿರುವ ಅಂಗನವಾಡಿ ಶಿಕ್ಷಕಿ ಶ್ರೀಮತಿ ಪದ್ಮಾವತಿ ದಾಮೋದರ ರವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಅವರಿಗೆ ಸಾಂಕೇತಿಕವಾಗಿ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭ ಅಂಗನವಾಡಿ ಮೇಲ್ವಿಚಾರಕಿ ಸುಶ್ಮಿತಾ ಕರ್ಕೇರಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಬುನಾದಿ ಹಾಕಿ, ಶೈಕ್ಷಣಿಕವಾಗಿ ಸದೃಢ ಪಂಚಾಂಗವನ್ನು ರಚಿಸಿದ ಇವರ ಸೇವೆಯನ್ನು ಕಳವಾಡಿ ಈಶ್ವರ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು,ಊರಿನ ಹಿರಿಯರು, ಶಿಕ್ಷಣಾಭಿಮಾನಿಗಳು ಹಾಗೂ ಪೋಷಕರು ಈ ವೇಳೆ ಸ್ಮರಿಸಿದರು.

