ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಜಾಗಕ್ಕೆ ಇದೀಗ ಸುಧಾ ಯಾದವ್ ಅವರನ್ನು ನಿಯೋಜಿಸಲಾಗಿದೆ. ಕರ್ನಾಟಕ ಸೇರಿ ಒಟ್ಟು ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಇವರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.
ಕಳೆದ ಕೆಲ ವರ್ಷಗಳಿಂದ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಜಾಗಕ್ಕೆ ಇದೀಗ ಸುಧಾ ಯಾದವ್ ಅವರನ್ನು ನಿಯೋಜಿಸಲಾಗಿದೆ. ಆದರೆ, ಹುದ್ದೆಯಿಂದ ನಿರ್ಗಮಿಸುತ್ತಿರುವ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಷ್ಟ್ರಪತಿ ಭವನವಾಗಲಿ ಮುಂದಿನ ಯಾವುದೇ ಹೊಣೆಗಾರಿಕೆಯನ್ನು ಸದ್ಯಕ್ಕೆ ನಿಗದಿಪಡಿಸಿಲ್ಲ. ಬಿಜೆಪಿಯ ಹಿರಿಯ ನಾಯಕಿ ಮತ್ತು ಸಂಸದೀಯ ಮಂಡಳಿಯ ಸದಸ್ಯೆಯಾದ ನೂತನ ರಾಜ್ಯಪಾಲೆ ಸುಧಾ ಯಾದವ್ ಅವರು ಶೀಘ್ರದಲ್ಲೇ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

