ಮೈಸೂರಿನ ಇತಿಹಾಸ ಪ್ರಸಿದ್ಧ ದಸರಾ ಮಹೋತ್ಸವದ ವೈಭವದಲ್ಲಿ ಈ ಬಾರಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿದ್ದ ‘ದಸರಾ ಕಂಬಳ’ ಕೂಟ ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ. ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳದ ಕನೆಹಲಗೆ ವಿಭಾಗದಲ್ಲಿ, ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ ಅವರ ಕೋಣಗಳು ಆರೂವರೆ ಕೋಲು ನಿಶಾನೆಗೆ ನೀರು ಹಾಯಿಸುವ ಮೂಲಕ ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡು ಸಾಧನೆ ಮಾಡಿವೆ.

ವೀರೇಂದ್ರ ವಿಕ್ರಮ್ ಪೂಜಾರಿ ಅವರ ಸಾರಥ್ಯದಲ್ಲಿ ಕಣಕ್ಕಿಳಿದ ಈ ಕೋಣಗಳು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಮೈಸೂರಿನ ದಸರಾ ಅಂಗಳದಲ್ಲಿ ಕರಾವಳಿಯ ಜಾನಪದ ಕ್ರೀಡೆಯ ಹೆಮ್ಮೆಯ ಧ್ವಜವನ್ನು ಹಾರಿಸಿವೆ. ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯನ್ನು ರಾಜಧಾನಿಯ ಸಾಂಸ್ಕೃತಿಕ ಹಬ್ಬದಲ್ಲಿ ಪ್ರದರ್ಶಿಸಿ ಗೆಲುವು ಸಾಧಿಸಿದ ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ ಹಾಗೂ ಅವರ ತಂಡಕ್ಕೆ ಎಲ್ಲೆಡೆಯಿಂದ ಹಾರ್ದಿಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳು ಹರಿದುಬರುತ್ತಿವೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading